ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಯಿಗೆ ಬಂದಂಗೆ ಮಾತಾಡಿದ್ರೆ ಚೆನ್ನಾಗಿರಲ್ಲ: ಸಿದ್ದರಾಮಯ್ಯಗೆ ಶಾಸಕ ಬೋಪಯ್ಯ ಎಚ್ಚರಿಕೆ

ಕೊಡಗು: ಕೊಡಗಿನ ಶಾಲೆಯಲ್ಲಿ ಸಂಘ ಪರಿವಾರದ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ಕುರಿತು ಶಾಸಕ ಕೆ.ಜಿ ಬೋಪಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಆರ್‌ಎಸ್ಎಸ್ ಶಿಬಿರದಲ್ಲಿ ಶಾಸಕರು ಭಾಗವಹಿಸಬಾರದು ಎನ್ನುವ ಕಾನೂನು ಇದೇಯಾ? ನಮ್ಮ ಪರಿವಾರದ ಕಾರ್ಯಕ್ರಮ ನಡೆಯುವಾಗ ಭೇಟಿ ಕೊಡೋದು ನನ್ನ ಕರ್ತವ್ಯ. ಗನ್ ಹಿಡಿಯೋದು ನಮ್ಮ ಜನ್ಮ ಸಿದ್ಧ ಹಕ್ಕು. ಅದನ್ನು ಕೇಳೋಕೆ ಇವನ್ಯಾರು ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶಾಸಕ ಬೋಪಯ್ಯ ಅವರು, ವಿಶ್ವ ಹಿಂದೂ ಪರಿಷತ್, ಭಜರಂಗದಳ ಪ್ರತಿ ವರ್ಷ ಅಭ್ಯಾಸ ವರ್ಗ ಮಾಡ್ತಾರೆ. ಈ ವರ್ಷ ಕೊಡಗಿನಲ್ಲಿ ಕಾರ್ಯಕ್ರಮ ಮಾಡಿದ್ದಾರೆ ಅಷ್ಟೇ. ಏನಾದ್ರೂ ತ್ರಿಶೂಲ ಬ್ಯಾನ್ ಆಗಿದೆಯಾ.? ಸಿದ್ದರಾಮಯ್ಯರ ಚರಿತ್ರೆ ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ದಿನಚರಿ ಶುರುವಾಗೋದೆ ಅಲ್ಪಸಂಖ್ಯಾತರನ್ನು ಹೇಗೆ ಓಲೈಸಲಿ ಎಂದು. ಸಿದ್ದರಾಮಯ್ಯ ನಮಗೆ ಸಂವಿಧಾನದ ಬದ್ಧತೆ ಬಗ್ಗೆ ಹೇಳಿ ಕೊಡುವ ಅಗತ್ಯ ಇಲ್ಲ. ಇವರದೇ ಶಾಸಕ ಓರ್ವ ದಲಿತನ ಮನೆಗೆ ಡಿಜೆ ಹಳ್ಳಿ ಕೆಜೆ ಹಳ್ಳಿಯಲ್ಲಿ ಬೆಂಕಿ ಹಾಕಿದಾಗ ಸಂವಿಧಾನ ಎಲ್ಲೋಗಿತ್ತು? ಹುಬ್ಬಳ್ಳಿಯಲ್ಲಿ ಪೊಲೀಸ್‌ ಠಾಣೆ ಮೇಲೆ‌ದಾಳಿ ಮಾಡಿದಾಗ ಸಂವಿಧಾನ ಇರಲಿಲ್ವಾ.? ಸಿದ್ದರಾಮಯ್ಯ ಸಂವಿಧಾನವನ್ನ ಮೊದಲು ಸರಿಯಾಗಿ ಓದಬೇಕು. ಏರ್ ಗನ್ ಬಳಸಲು ಲೈಸನ್ಸ್ ಬೇಕಿಲ್ಲ, ಪರಿಸ್ಥಿತಿ ಹಾಗಿದೆ, ಸೆಲ್ಫ್ ಡಿಫೆನ್ಸ್ ಬೇಕಲ್ವಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಸುಮ್ಮನೆಗೆ ಬಾಯಿಗೆ ಬಂದಂಗೆ ಮಾತಾಡಿದ್ರೆ ಚೆನ್ನಾಗಿರಲ್ಲ. ನಮಗೂ ಮಾತಾಡೋಕೆ ಬರುತ್ತೆ. ಹಿಂದೂ ಸಮಾಜದ ರಕ್ಷಣೆಗೆ ಅಭ್ಯಾಸ ಮಾಡಿದರೆ ಅದರಲ್ಲಿ ತಪ್ಪೇನಿದೆ? ಎಲ್ಲೂ ಕಾನೂನು ಉಲ್ಲಂಘನೆ ಮಾಡಿಲ್ಲ. ಎಸ್‌ಡಿಪಿಐ ಅವರು ಹಾದಿ ಬೀದಿಯಲ್ಲಿ ಹೋಗೋರು, ಅವರಿಗೆಲ್ಲಾ ಕೌಂಟರ್ ಕೊಡಲ್ಲ ಎಂದ ಅವರು, ಎಸ್‌ಡಿಪಿಐ, ಪಿಎಫ್‌ಐ ಈ ದೇಶಕ್ಕೆ ಮಾರಕ, ಅವುಗಳನ್ನ ಬ್ಯಾನ್ ಮಾಡಬೇಕು. ಎಸ್‌ಡಿಪಿಐ ಪ್ರಕರಣ ದಾಖಲು ಮಾಡಿದರೂ ಅದನ್ನು ಎದುರಿಸುವ ಶಕ್ತಿ ನನಗಿದೆ ಎಂದು ಕೆ. ಜಿ. ಬೋಪಯ್ಯ ಸವಾಲೆಸೆದಿದ್ದಾರೆ.

Edited By : Somashekar
PublicNext

PublicNext

17/05/2022 04:04 pm

Cinque Terre

69.76 K

Cinque Terre

14

ಸಂಬಂಧಿತ ಸುದ್ದಿ