ಪುತ್ತೂರು: ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿಯ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿರುವ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆಗೆ ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರಕಾರಿ ಪ್ರಾಯೋಜಿತ ಹತ್ಯೆಗಳು ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ತಿಳಿದಿದೆ. ದಕ್ಷಿಣ ಕನ್ನಡ, ಕೊಡಗು ಹಾಗೂ ಉತ್ತರ ಕನ್ನಡ ಭಾಗದಲ್ಲಿ ನಿರ್ದಿಷ್ಟ ಸಮುದಾಯ ಮತ್ತು ಸಂಘಟನೆಗಳನ್ನು ಗುರಿಯಾಗಿಸಿ ಹತ್ಯೆ ನಡೆದಿದ್ದು, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇಂಥ ಘಟನೆಗಳಿಗೆ ಕಡಿವಾಣ ಹಾಕಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಿಂದೂ ಯುವಕನ ಕೊಲೆ ನಡೆದಿತ್ತು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಮಂಗಳೂರಿನಲ್ಲಿದ್ದರೂ, ಹತ್ಯೆಯಾದ ಯುವಕನ ಕುಟುಂಬವನ್ನು ಭೇಟಿ ಮಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ತಾಲಿಬಾನ್ ಸಂಸ್ಕೃತಿಯ ಬಗ್ಗೆ ಮಾತನಾಡುವ ಯು.ಟಿ. ಖಾದರ್ ದಕ್ಷಿಣಕನ್ನಡ ಶಾಂತಿಕದಡಲು ಎಷ್ಟು ಕೊಡುಗೆ ನೀಡಿದ್ದಾರೆ ಎನ್ನುವುದು ಜನತೆಗೆ ತಿಳಿದಿದೆ ಎಂದರು.
PublicNext
17/05/2022 04:35 pm