ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ ಮೂರು ಪಕ್ಷಗಳ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ನಾಲ್ಕು ಕಾಂಗ್ರಸ್ ನ ಎರಡು ಹಾಗೂ ಜೆಡಿಎಸ್ ನ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು ಅಲ್ಲಿಗೆ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.
ಬಿಜೆಪಿಯಿಂದ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ ಮಾತ್ರವಲ್ಲ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ ಆರಂಭವಾಗುವ ಮುನ್ಸೂಚನೆ ನೀಡಿದೆ..
PublicNext
24/05/2022 09:21 pm