ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಜೆಪಿ ಷಡ್ಯಂತ್ರವನ್ನು ಡಿಕೆಶಿ ಸಮರ್ಥವಾಗಿ ಎದುರಿಸುತ್ತಾರೆ: ಡಿ.ಕೆ.ಸುರೇಶ್

ಬೆಂಗಳೂರು: ಬಿಜೆಪಿ ಸರ್ಕಾರದ ಒಳಸಂಚು, ಷಡ್ಯಂತ್ರವನ್ನು ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನವರು ಸಮರ್ಥವಾಗಿ ಎದುರಿಸಲಿದ್ದಾರೆ. ನಾವು ಎಲ್ಲದ್ದಕ್ಕೂ ಸಿದ್ಧವಾಗಿದ್ದೇವೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯ ( ಇ.ಡಿ.) ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ವಿಚಾರವಾಗಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಯಾವುದೇ ಕಾರಣಕ್ಕೂ ಅವರಿಗೆ ಹೆದರುವುದಿಲ್ಲ, ಶರಣಾಗುವುದಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಸುದೀರ್ಘವಾಗಿ ತನಿಖೆ ನಡೆಯುತ್ತಲೇ ಇದೆ. ಇನ್ನೂ ನಡೆಯಲಿ. ಅದನ್ನು ಎದುರಿಸಲು ನಾವು ಮಾನಸಿಕವಾಗಿ, ದೈಹಿಕವಾಗಿ ಸಮರ್ಥವಾಗಿದ್ದೇವೆ ಎಂದರು.

ಮೋದಿ ಅವರು ಪ್ರಧಾನ ಮಂತ್ರಿಯಾದ ಕಳೆದ ಎಂಟು ವರ್ಷಗಳಲ್ಲಿ, ವಿರೋಧ ಪಕ್ಷಗಳ ಬಗ್ಗೆ ಯಾವ ರೀತಿ ನಡೆದುಕೊಂಡಿದ್ದಾರೆ. ತಮ್ಮ ವಿರೋಧಿಗಳು, ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವವರನ್ನು ಯಾವ ರೀತಿ ಹತ್ತಿಕ್ಕಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇದು ಕೂಡ ಅದರ ಭಾಗ. ಆರೋಪಪಟ್ಟಿಯಲ್ಲಿ ಏನಿದೆ ಎಂದು ನನಗೆ ಗೊತ್ತಿಲ್ಲ. ಈ ಪ್ರಕರಣದಲ್ಲಿ ರಾಜಕೀಯ ಬಿಟ್ಟು ಬೇರೇನೂ ಇಲ್ಲ ಎಂದರು.

Edited By : Somashekar
PublicNext

PublicNext

26/05/2022 07:13 pm

Cinque Terre

72.26 K

Cinque Terre

16