ಬಂಟ್ವಾಳ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾಗೆ ನ್ಯಾಶನಲ್ ಹೆರಾಲ್ಡ್ ಕೇಸ್ ಸುಳಿಯಲ್ಲಿದ್ದರೆ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಆರೋಪಿಯಾಗಿದ್ದಾರೆ.
ಕಾಂಗ್ರೆಸ್ ನೇತೃತ್ವ ವಹಿಸಿದವರೆಲ್ಲ ಕಳಂಕಿತರು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಂಟ್ವಾಳದಲ್ಲಿ ಭಾನುವಾರ ಬಿಜೆಪಿ ಯುವಮೋರ್ಚಾದ ವಿಕಾಸ್ ತೀರ್ಥ ರ್ಯಾಲಿಯ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಮಾರೋಪದಲ್ಲಿ ಅವರು ಮಾತನಾಡಿದರು.
ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗಳಿಸಲಿದೆ ಎಂದ ನಳಿನ್, .ಬೊಮ್ಮಾಯಿ ಸರಕಾರ ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದು, ಉತ್ತಮ ಕೆಲಸ ಮಾಡುತ್ತಿದೆ ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಬಿಟ್ಟರೆ ಕಾಂಗ್ರೆಸ್ ನ ಎಲ್ಲ ಪ್ರಧಾನಿಗಳೂ ಕಳಂಕಿತರು ಎಂದವರು ಹೇಳಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಗುರುದತ್ತ ನಾಯಕ್ ವಹಿಸಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ. ಸಂದೀಪ್ ಕುಮಾರ್, ರಾಜ್ಯ ಕಾರ್ಯದರ್ಶಿ ಶ್ವೇತಾಕುಮಾರಿ, ಪಕ್ಷ ನಾಯಕರಾದ ಸತೀಶ್ ಕುಂಪಲ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ರಾಮದಾಸ್ ಬಂಟ್ವಾಳ ಉಪಸ್ಥಿತರಿದ್ದರು.
ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಸ್ವಾಗತಿಸಿದರು.
PublicNext
12/06/2022 02:50 pm