ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಈಗ ರಾಷ್ಟ್ರಪತಿ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಇಂದು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಒಡಿಶಾ ಮೂಲದ ಬುಡಕಟ್ಟು ಸಮುದಾಯದ ಮುರ್ಮು ಅವರು ಸದ್ಯ ಝಾರ್ಖಂಡ್ ರಾಜ್ಯಪಾಲ ಹುದ್ದೆಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರುಗಳಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ಪ್ರಕಾಶ್ ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು. 64 ವರ್ಷದ ಮರ್ಮು ಅವರು ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರದಲ್ಲಿ 2000 ವರ್ಷದಿಂದ 2004ರವರೆಗೆ ಸಚಿವರಾಗಿ ಹಾಗೂ 2015 ರಿಂದ 2021ರವರೆಗೆ ಜಾರ್ಖಂಡ್ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, 21ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಆಯ್ಕೆಯಾಗುವ ಹೊಸ ರಾಷ್ಟ್ರಪತಿ ಅವರು ಜುಲೈ 25ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.
PublicNext
24/06/2022 06:36 pm