ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING: ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಳಯರಾಜಾ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ ಉಷಾ, ವಿ. ವಿಜಯೇಂದ್ರ ಪ್ರಸಾದ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಎಲ್ಲರನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

ಇಳಯರಾಜಾ ಕುರಿತು ಟ್ವಿಟರ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಇಳಯರಾಜಾ ಜೀ ಅವರ ಸೃಜನಶೀಲ ಪ್ರತಿಭೆ ತಲೆಮಾರುಗಳಾದ್ಯಂತ ಜನರನ್ನು ಮಂತ್ರಮುಗ್ಧರನ್ನಾಗಿಸಿದೆ. ಅವರ ಕೃತಿಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಇವರು ರಾಜ್ಯಸಭೆಗೆ ನಾಮನಿರ್ದೇಶನ ಆಗಿರುವುದಕ್ಕೆ ಸಂತೋಷವಾಗಿದೆ” ಎಂದಿದ್ದಾರೆ.

ಅದರಂತೆ ಪಿ.ಟಿ ಉಷಾ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಗಮನಾರ್ಹ ಪಿ.ಟಿ ಉಷಾ ಅವರು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಗಳಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಲ್ಲಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಅಷ್ಟೇ ಪ್ರಶಂಸನೀಯವಾಗಿದೆ ಎಂದು ಮೆಚ್ಚಿಕೊಂಡಿದ್ದಾರೆ.

ಇನ್ನು ಡಾ.ವೀರೇಂದ್ರ ಹೆಗ್ಗಡೆಯವರು ಅಸಾಧಾರಣ ಸಮುದಾಯ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ಕಾರ್ಯಕ್ಕೆ ಸಾಕ್ಷಿಯಾಗುವ ಅವಕಾಶ ನನಗೆ ದೊರೆತಿದೆ. ಅವರು ಖಂಡಿತವಾಗಿಯೂ ಸಂಸದೀಯ ಕಾರ್ಯಕಲಾಪಗಳನ್ನು ಶ್ರೀಮಂತಗೊಳಿಸುತ್ತಾರೆ ಎಂದಿದ್ದಾರೆ.

ಇದಲ್ಲದೇ ವಿ. ವಿಜಯೇಂದ್ರ ಪ್ರಸಾದ್ ಅವರು ದಶಕಗಳಿಂದ ಸೃಜನಶೀಲ ಜಗತ್ತಿನೊಂದಿಗೆ ಸಂಬಂಧ ಹೊಂದಿದ್ದಾರೆ. ಅವರ ಕೃತಿಗಳು ಭಾರತದ ಭವ್ಯ ಸಂಸ್ಕೃತಿಯನ್ನು ಪ್ರದರ್ಶಿಸುತ್ತವೆ ಮತ್ತು ಜಾಗತಿಕವಾಗಿ ಛಾಪು ಮೂಡಿಸಿವೆ ಎಂದು ಬರೆದಿರುವ ಮೋದಿ ವಿಜಯೇಂದ್ರ ಪ್ರಸಾದ್ ಅವರನ್ನು ಅಭಿನಂದಿಸಿದ್ದಾರೆ.

Edited By : Nagaraj Tulugeri
PublicNext

PublicNext

06/07/2022 09:24 pm

Cinque Terre

131.67 K

Cinque Terre

30

ಸಂಬಂಧಿತ ಸುದ್ದಿ