ಬೆಂಗಳೂರು: ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರದ ಇನ್ನೋರ್ವ ಸಚಿವ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ಜತೆ ದೇವೇಗೌಡರ ನಿವಾಸಕ್ಕೆ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮಾತುಕತೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಹಾಜರಿದ್ದರು.
ವರದಿ-- ಪ್ರವೀಣ್ ರಾವ್
PublicNext
10/07/2022 10:32 pm