ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ನೆರೆ, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನೆರೆ ಸಂತ್ರಸ್ತರಿಗೆ ನೆರವಾಗುವ ಕಾರ್ಯಕ್ಕೂ ಸರ್ಕಾರ ಸೂಚನೆ ನೀಡಿದೆ. ಈ ಬೆನ್ನಲ್ಲೇ ಜುಲೈ.22ರಂದು ರಾಜ್ಯಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ದಿನಾಂಕ 22-07-2022ರಂದು ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ನಿಗದಿಪಡಿಸಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನೆರೆ ಸಂತ್ರಸ್ತರಿಗೆ ವಿವಿಧ ನೆರವು ಕಾರ್ಯಗಳ ಬಗ್ಗೆ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವಂತ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಅನುದಾನವನ್ನು ಮಂಜೂರು ಮಾಡಲಾಗುತ್ತದೆ ಎನ್ನಲಾಗಿದೆ.
PublicNext
18/07/2022 05:13 pm