ಗದಗ: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದಿಂದ ಜಿಲ್ಲೆಯಾದ್ಯಂತ ಅಕಾಲಿಕ ಮಳೆಗೆ ಬೆಳೆ ಹಾನಿ ಮತ್ತು ಬಿದ್ದ ಮನೆಗೆ ಪರಿಹಾರ ಮತ್ತು ಜಿಲ್ಲೆಯ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವಂತೆ ಗದಗ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಅಬ್ಬಿಗೇರಿ ಜಿಲ್ಲಾ ಅಧ್ಯಕ್ಷರಾದ ಶರಣು ಗೋಡಿ ಮತ್ತು ಯುವ ಘಟಕದ ಅಧ್ಯಕ್ಷರಾದ ನಿಂಗನಗೌಡ ಮಾಲಿ ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಶರಣು ಗೋಡಿ ಅಕಾಲಿಕ ಮಳೆಗೆ ಬಡ ಕುಟುಂಬಗಳ ಮನೆಗಳು ಬಿದ್ದಿವೆ ಹಾಗೂ ರೈತರು ಬೆಳೆದ ಬೆಳೆಗಳು ಹಾಳಾಗಿವೆ. ಇನ್ನೂ ಗದಗ ಜಿಲ್ಲಾದಂತ್ಯ ರಸ್ತೆಗಳು ಸಂಪೂರ್ಣ ಹಾಳಾಗಿವೆ ಮತ್ತು ಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರಕ್ಕೆ ಲಿಂಕ ತೆಗೆದುಕೊಳ್ಳುತ್ತಿದ್ದಾರೆ ಕೂಡಲೇ ಸರಿಪಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು ಮತ್ತು ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸರ್ವ ಸದಸ್ಯರು ಭಾಗವಹಿಸಿದ್ದರು.
PublicNext
18/07/2022 06:30 pm