ಬೆಂಗಳೂರು: ಜಿಎಸ್‌ಟಿ ಮೂಲಕ ಕೇಂದ್ರ ಸರಕಾರವು ಬಡವರನ್ನು ದೋಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜಿಎಸ್ ಟಿ ಜನ ವಿರೋಧಿ ತೆರಿಗೆ ನೀತಿ. ಪೆಟ್ರೋಲ್ ಬೆಲೆ, ದಿನ ನಿತ್ಯದ ವಸ್ತು ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈಗ ಆಹಾರ ಪದಾರ್ಥಗಳಿಗೆ ಜಿಎಸ್‌ಟಿ ವಿಧಿಸಿ ಬಡವರ ಅನ್ನವನ್ನೂ ಕಸಿದುಕೊಳ್ಳಲಾಗುತ್ತಿದೆ. ಅಚ್ಛೇದಿನ್ ಎಂದರೆ ಇದೇನಾ? ಇವು ಜನ ವಿರೋಧಿ ಸರಕಾರಗಳು ಎಂದು ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಷ್ಟ್ರಪತಿ ಚುನಾವಣೆಯಲ್ಲಿ ಇಂದು ವಿಧಾನಸೌಧದಲ್ಲಿ ಮತ ಚಲಾಯಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಲು, ಮೊಸರು, ಉಪ್ಪಿನಕಾಯಿ ಮೇಲೆ ತೆರಿಗೆ ಹೆಚ್ಚು ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ತೆರಿಗೆ ಹೆಸರಿನಲ್ಲಿ ಲೂಟಿ ಮಾಡುವುದಕ್ಕೂ ಒಂದು ಮಿತಿ ಬೇಡವೇ? ಇದು ಜನ ವಿರೋಧಿ ನಿರ್ಧಾರ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
PublicNext
18/07/2022 07:27 pm