ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಆಜಾದಿ ಕಾ ಅಮೃತ್ ಮಹೋತ್ಸವ'ಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಮುಖ್ಯ ಅತಿಥಿ

ಬೆಂಗಳೂರು: ರಾಮನಗರದಲ್ಲಿ ಇದೇ 22ರಂದು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಈ ಸಂಬಂಧ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದ್ದಾರೆ. ಅಂದು ಜಿಲ್ಲೆಯ ಎಲ್ಲ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ, ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು. ಕಾರ್ಯಕ್ರಮ ಬೃಹತ್ ಸ್ವರೂಪದಲ್ಲಿ ನಡೆಯಲಿದ್ದು, ಅಪಾರ ಸಂಖ್ಯೆಯ ಜನ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಜಾಗವನ್ನು ತ್ವರಿತವಾಗಿ ನಿರ್ಧರಿಸಲಾಗುವುದು ಎಂದು ಅವರು ನುಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್‌ಪಿ ಸಂತೋಷ್ ಬಾಬು ಅವರು ರಾಮನಗರದಿಂದ ವರ್ಚುವಲ್‌ನಲ್ಲಿ ಭಾಗವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ, ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್, ಕಲಾವಿದೆ ವೀಣಾಮೂರ್ತಿ ಇದ್ದರು. ಬೆಂಗಳೂರು ವಿವಿಗೆ ಕಾರ್ಯ ಆಯೋಜನೆಯ ಉಸ್ತುವಾರಿ ನೀಡಲಾಗಿದೆ. ರಾಮನಗರ ಪಿ.ಜಿ‌ ಸೆಂಟರ್ ನಿರ್ದೇಶಕ ರಾಮಕೃಷ್ಣ ಕೂಡ ಇದ್ದರು.

Edited By : Nagaraj Tulugeri
PublicNext

PublicNext

19/07/2022 04:07 pm

Cinque Terre

22.32 K

Cinque Terre

0

ಸಂಬಂಧಿತ ಸುದ್ದಿ