ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈ ಬಾರಿ ಅದ್ಧೂರಿ ದಸರಾ: ನಾಳೆ ರವಿವಾರ ಗಜ ಪಯಣ ಆರಂಭ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ ನಾಳೆ ರವಿವಾರದಿಂದಲೇ ಗಜ ಪಯಣ ಆರಂಭವಾಗಿ ಅರಮನೆಗೆ ಆನೆಗಳನ್ನು ಸ್ವಾಗತಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಶಖರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗಿದ್ದು, ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡುವ ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.

ಈ ಬಾರಿಯ ದಸರಾದಲ್ಲಿ ದೇಶ, ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. 15 ದಿನ ಮುಂಚಿತವಾಗಿ ವಸ್ತುಪ್ರದರ್ಶನ ಆರಂಭವಾಗಲಿದೆ. ದಸರಾ ಸಂಬಂಧ ಸಾಕಷ್ಟು ಪ್ರಚಾರ ನೀಡುವ ಕುರಿತು ಚರ್ಚೆಯಾಗಿದೆ ಎಂದರು.

ಕಳೆದ ಎರಡು ವರ್ಷದಂತೆ ಈ ವರ್ಷ ಕೂಡ ಖರ್ಚಿನ ಲೆಕ್ಕ ನೀಡಲಾಗುತ್ತದೆ. ದಸರಾ ಮುಕ್ತಾಯವಾಗುತ್ತಿದ್ದಂತೆ ಸಾರ್ವಜನಿಕರಿಗೆ ವೆಚ್ಚದ ಲೆಕ್ಕ ನೀಡಲಾಗುತ್ತದೆ ಎಂದು ತಿಳಿಸಿದರು.

ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಆ.7ರಂದು ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

Edited By : Nagaraj Tulugeri
PublicNext

PublicNext

06/08/2022 07:57 pm

Cinque Terre

54.32 K

Cinque Terre

1

ಸಂಬಂಧಿತ ಸುದ್ದಿ