ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಂಪು ಕೋಟೆಯಲ್ಲಿ ನಾಳೆ 9ನೇ ಬಾರಿಗೆ ಪ್ರಧಾನಿ ಮೋದಿ ಭಾಷಣ; ಹೇಗಿದೆ ಭದ್ರತೆ

ನವದೆಹಲಿ: ಬ್ರಿಟಿಷರ ಕಪಿಮುಷ್ಠಿಯಿಂದ ಸ್ವತಂತ್ರಗೊಂಡ ಭಾರತಕ್ಕೆ ಈಗ 75 ವರ್ಷಗಳ ಸಂಭ್ರಮ. ಸ್ವಾತಂತ್ರ್ಯ ದಿನಾಚರಣೆಯ ಅಮೃತೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕೆಂಪುಕೋಟೆಯಿಂದ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯಲ್ಲಿ ನಿಂತು 9ನೇ ಬಾರಿ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಹಾಗಾಗಿ ದೆಹಲಿಯ ಕೆಂಪುಕೋಟೆಯ ಮೇಲೆ ಇಡೀ ದೇಶದ ನೋಟ ನೆಟ್ಟಿದೆ.

ಇಡೀ ದೇಶ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲು ಸಜ್ಜಾಗಿರುವ ಬೆನ್ನಲ್ಲೇ ಭಯೋತ್ಪಾದಕರ ದಾಳಿ ಭೀತಿ ಕೂಡ ಎದುರಾಗಿದೆ. ಈ ಸಂಬಂಧ ಈಗಾಗಲೇ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯೂರೋ) ಐದು ಹೊಸ ಎಚ್ಚರಿಕೆಗಳನ್ನು ನೀಡಿದೆ. ಸ್ವಾತಂತ್ರ್ಯ ದಿನಾಚರಣೆಯ ಮೊದಲು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಇತರ ಹಲವಾರು ನಗರಗಳಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಗಳ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕೆಂಪು ಕೋಟೆ ಬಳಿ ಹದ್ದಿನ ಕಣ್ಣಿಡಲಾಗಿದ್ದು, 400 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವೈಮಾನಿಕ ಉಪಕರಣಗಳು ಮತ್ತು ಡ್ರೋನ್‌ಗಳು ಸೇರಿದಂತೆ ಮಾನವಸಹಿತ ಅಥವಾ ಮಾನವರಹಿತವಾಗಿ ವಸ್ತುಗಳಿಂದ ಯಾವುದೇ ಬೆದರಿಕೆಯನ್ನು ಎದುರಿಸಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಒಂದು ದಿನ ಮುಂಚಿತವಾಗಿಯೇ ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ. ಈ ವ್ಯವಸ್ಥೆ ಮತ್ತು ಅದರ ಪಕ್ಕದಲ್ಲಿ ಸ್ಥಾಪಿಸಲಾದ ಜಾಮರ್‌ನ ಸಹಾಯದಿಂದ ಡ್ರೋನ್‌ಗಳನ್ನು ಪತ್ತೆಹಚ್ಚುವ ಮತ್ತು ನಿಷ್ಕ್ರಿಯಗೊಳಿಸಲು ಸಾಧ್ಯವಾಗಲಿದೆ ಎಂದು ಡಿಆರ್‌ಡಿಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಂತ್ರಿಕತೆಯನ್ನು ಬಳಸಿಕೊಂಡು ಭಯೋತ್ಪಾದಕರು ಹಾರುವ ವಸ್ತುಗಳ ಕೆಂಪು ಕೋಟೆಯ ಮೇಲೆ ದಾಳಿ ಮಾಡಬಹುದು ಎಂಬ ಎಚ್ಚರಿಕೆ ಹಿನ್ನೆಲೆಯಲ್ಲೂ ಕೆಂಪುಕೋಟೆ ಬಳಿ ಗಾಳಿಪಟ ಸೇರಿದಂತೆ ಯಾವ ವಸ್ತುಗಳನ್ನೂ ಹಾರಿಸದಂತೆ ದೆಹಲಿ ಪೊಲೀಸರು ನಿಷೇಧ ಹೇರಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಗಾಳಿಪಟ ಕ್ಯಾಚರ್ಸ್​ಅನ್ನು ಅಗತ್ಯ ಉಪಕರಣಗಳೊಂದಿಗೆ ನಿಯೋಜಿಸಲಾಗಿದೆ. ಅವರು ಗಾಳಿಪಟಗಳು, ಬಲೂನ್​ಗಳು ಮತ್ತು ಚೈನೀಸ್ ಲ್ಯಾಂಟರ್ನ್​ಗಳು ಸಮಾರಂಭದ ಪ್ರದೇಶವನ್ನು ತಲುಪದಂತೆ ತಡೆಯುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

14/08/2022 09:23 pm

Cinque Terre

41.27 K

Cinque Terre

0

ಸಂಬಂಧಿತ ಸುದ್ದಿ