ಮೈಸೂರು-ಪ್ರಾದೇಶಿಕ ಭಾಷೆಗಳಿಗೆ ಧಕ್ಕೆ ಆಗದಂತೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ನಿಟ್ಟನಲ್ಲಿ ಚಿಂತನೆ ನಡೆಯುತ್ತಿದೆ. ಮೊದಲು ೩ರಿಂದ ೮ ವರ್ಷದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ನಂತರ ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇನ್ನು ನೂತನ ಶಿಕ್ಷಣ ಪದ್ಧತಿಯಲ್ಲಿ ಗುರುಕುಲ ಹಾಗೂ ಭಾರತೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆ ನೈತಿಕತೆಯು ಇದರಲ್ಲಿ ಅಡಕವಾಗಿರುತ್ತದೆ. ಮಕ್ಕಳ ಹಕ್ಕುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ಆರ್‌ಟಿಇ ಪಾಲಿಸಿಯನ್ನು ಎಂಟರಿಂದ ಹನ್ನೆರಡನೇ ತರಗತಿಯವರೆಗೂ ವಿಸ್ತರಿಸಲು ಚಿಂತನೆ ಕೂಡ ನಡೆಸಲಾಗುತ್ತಿದೆ ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ
PublicNext
03/09/2022 04:50 pm