ಬೆಂಗಳೂರು : ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಹೆಚ್.ಎ.ಎಲ್ ನ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಧಾರವಾಡ ಪ್ರವಾಸ ಮಾಡಲಿದ್ದಾರೆ. ವಿವಿಧ ಬಗೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಂತರ 3:30ಕ್ಕೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಸಂಜೆ 4:00 ಗಂಟೆಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
ಸಂಜೆ 4:30ಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಕಾಮಗಾರಿಯ ಶಂಕು ಸ್ಥಾಪನೆ ಕೂಡ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ಹುಬ್ಬಳ್ಳಿ ಧಾರವಾಡ ನಗರದ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದಾರೆ. ನಂತರ ಹುಬ್ಬಳ್ಳಿಯಲ್ಲೇ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಅಷ್ಟೇ ಅಲ್ಲದೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 9 ಗಂಟೆಗೆ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
PublicNext
04/09/2022 02:31 pm