ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ. ರೇಜು. ಎಂಟಿ. ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆಕೆಆರ್ ಡಿಬಿ ಉಪ ಕಾರ್ಯದರ್ಶಿ ಆನಂದ್ ಪ್ರಕಾಶ್ ಮೀನಾ ಹಾಗೂ ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಾ.ಅನುರಾಧಾ ಕೆ.ಎನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
PublicNext
09/09/2022 08:35 am