ಬೆಂಗಳೂರು: ರಾಷ್ಟ್ರದ ಪ್ರಥಮ ಪ್ರಜೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದಸರಾ ಉತ್ಸವನ್ನು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಬಾರಿ ಮೈಸೂರು ದರಸಾ ಸೆಪ್ಟೆಂಬರ್ 26ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5ವರೆಗೆ ನಡೆಯಲಿದೆ. ಪ್ರತಿಷ್ಠಿತ ಮೈಸೂರು ದಸರಾಗೆ ಸರ್ಕಾರ ಈಗಾಗಲೇ ಹಲವು ಸುತ್ತಿನ ಪೂರ್ವಭಾವಿ ಸಭೆ ನಡೆಸಿದೆ. ಮೈಸೂರು ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ 2022ರ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
PublicNext
10/09/2022 07:04 pm