ಬೆಂಗಳೂರು:ಜಲೈ ತಿಂಗಳಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟರು ಪತ್ನಿ ನೂತನಾ ಅವರಿಗೆ ಸರ್ಕಾರಿ ನೌಕರಿ ನೀಡೋದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ದೊಡ್ಡ ಬಳ್ಳಾಪುರದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸ್ವತಃ ಮುಖ್ಯಮಂತ್ರಿಯೇ ಈ ಘೋಷಣೆ ಮಾಡಿದ್ದಾರೆ. ಜುಲೈ 26ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು. ಇದೀಗ ಅವರ ಪತ್ನಿ ನೂತನಾರಿಗೆ ಸರ್ಕಾರಿ ಕೆಲಸ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
PublicNext
11/09/2022 07:52 am