ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ದಸರಾ ಜಂಬೂ ಸವಾರಿಯ ಮೆರವಣಿಗೆಗೆ ಪ್ರಧಾನಿ ಮೋದಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ ಮಾಡಲಿದ್ದಾರೆ.

ನಾಡಹಬ್ಬ ದಸರಾ ಸೆಪ್ಟೆಂಬರ್ 26 ರಿಂದ ಆರಂಭವಾಗಲಿದೆ. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟಿಸಲಿದ್ದಾರೆ. ಜೊತೆಗೆ ಅವರು ದಸರಾ ಉದ್ಘಾಟನೆಗೆ ಬರಲು ಕೂಡ ಅಧಿಕೃತವಾಗಿಯೆ ಸಮ್ಮತಿಸಿದ್ದಾರೆ. ಈ ಕಾರಣಕ್ಕೆ ಈ ಬಾರಿಯ ದಸರಾ ಮಹತ್ವದ್ದಾಗಿತ್ತು.

ಅಷ್ಟೇ ಅಲ್ಲದೆ ದಸರಾ ಉದ್ಘಾಟನೆ ವಿಚಾರಕ್ಕೆ ಮಾತ್ರವಲ್ಲ ದಸರಾ ಜಂಬೂ ಸವಾರಿಯ ವಿಚಾರಕ್ಕೂ ಈ ಬಾರಿಯ ದಸರಾ ಮಹತ್ವಪೂರ್ಣವಾದದ್ದು. ಕಾರಣ, ದಸರಾ ಜಂಬೂ ಸವಾರಿಯ ಮೆರವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆನೆಯ ಮೇಲಿನ ಚಿನ್ನದ ಅಂಬಾರಿಯಲ್ಲಿ ಕುಳಿತ ಚಾಮುಂಡಿ ತಾಯಿಗೆ ಪ್ರಧಾನಿ ಮೋದಿ ಪುಷ್ಪಾರಾರ್ಚನೆ ನೆರವೇರಿಸಲಿದ್ದಾರೆ. ಪ್ರಧಾನ ಮಂತ್ರಿಯೊಬ್ಬರು ಚಿನ್ನದ ಅಂಬಾರಿಗೆ ಪುಷ್ಪಾರಾರ್ಚನೆ ಮಾಡ್ತಿರೋದು ಇದೇ ಮೊದಲು ಈ ಕಾರಣಕ್ಕೆ ಈ ಬಾರಿಯ ದಸರಾ ಐತಿಹಾಸಿಕ ದಾಖಲೆ ಆಗಲಿದೆ.

Edited By : Vijay Kumar
PublicNext

PublicNext

15/09/2022 05:45 pm

Cinque Terre

66.95 K

Cinque Terre

4