ಬೆಂಗಳೂರು: ಕನ್ನಡಪರತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದಲ್ಲಿ ಕನ್ನಡ ಬಳಕೆಯನ್ನು ಕಾನೂನಾತ್ಮಕವಾಗಿ ಕಡ್ಡಾಯಗೊಳಿಸುತ್ತೇವೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಕನ್ನಡವನ್ನು ರಕ್ಷಿಸಲು ಕನ್ನಡವನ್ನು ರಕ್ಷಿಸಲು ಹಾಗೂ ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ. ನೆಲ, ಜಲ, ಭಾಷೆಯ ವಿಚಾರದಲ್ಲಿ ನಮ್ಮ ಪಕ್ಷ ಹಾಗೂ ಸರ್ಕಾರ ಎಂದಿಗೂ ರಾಜಕೀಯದ ಹೊರತಾಗಿ ಚಿಂತಿಸುತ್ತೇವೆ. ಕನ್ನಡದ ಬಳಕೆಯನ್ನು ಹೆಚ್ಚಿಸಲು ಕನ್ನಡವನ್ನು ಕಾನೂನಾತ್ಮಕವಾಗಿ ಕಡ್ಡಾಯಗೊಳಿಸುವ ಕಾನೂನನ್ನು ಈ ಸದನದಲ್ಲಿಯೇ ಮಂಡಿಸಲಿದ್ದೇವೆ ಎಂದಿದ್ದಾರೆ.
PublicNext
15/09/2022 10:11 pm