ಶ್ರೀನಗರ: ದಿವಂಗತ ಮಹಾರಾಜ ಹರಿ ಸಿಂಗ್ ಅವರ ಜನ್ಮದಿನವಾದ ಸೆಪ್ಟೆಂಬರ್ 23ರಂದು ರಜಾದಿನವಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಘೋಷಿಸಿದೆ.
ಸೋಮವಾರ ಹೊರಡಿಸಲಾದ ಅಧಿಸೂಚನೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ರಜೆಯನ್ನು ಆಚರಿಸುತ್ತವೆ ಎಂದು ತಿಳಿಸಲಾಗಿದೆ. ಈ ರಜಾದಿನವು ಮಹಾರಾಜರ ಸೇವೆಗೆ ಗೌರವವಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಹಿಂದೆ ಹೇಳಿದ್ದರು.
PublicNext
19/09/2022 09:22 pm