ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಿ: ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಎಸ್‌.ಸಿ ಮತ್ತು ಎಸ್‌.ಟಿ ಸಮುದಾಯಕ್ಕೆ ಮೀಸಲಾತಿ ಏರಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ಮೇಲೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜನತಾ ಮಿತ್ರ ಸಮಾರೋಪ ಸಮಾವೇಶದ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು. ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಸರ್ವಪಕ್ಷದ ನಾಯಕರು ಈ ಬಗ್ಗೆ ಚರ್ಚಿಸಿದ್ದು, ಜನಗಣತಿ ಆಧಾರದ ಮೇಲೆ ಎಸ್ ಸಿ ಸಮಾಜಕ್ಕೆ ಶೇ. 15 ರಿಂದ ಶೇ.17 ಕ್ಕೆ ಹಾಗೂ ಎಸ್ ಟಿಗೆ ಶೇ.3 ರಿಂದ ಶೇ.7 ಕ್ಕೆ ಮೀಸಲಾತಿ ಏರಿಕೆ ಮಾಡಲು ಆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದಷ್ಟು ಬೇಗನೆ, ಸಮಯ ವ್ಯರ್ಥ ಮಾಡದೆ ಮೀಸಲಾತಿಯನ್ನು ಹೆಚ್ಚಿಸಿ ಜಾರಿಗೆ ತರಬೇಕು ಎಂದು ನಾನು ಸಲಹೆ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಸದನದಲ್ಲಿ ಹೇಳಿದ್ದರು. ಹಾಗಾಗಿ, ಸಭೆ ಕರೆಯಲಾಗಿತ್ತು. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದ್ದೆವು. ಆ ವರದಿಗೆ ನನ್ನ ನೇತೃತ್ವದ ಸರಕಾರ ಒಪ್ಪಿಗೆಯನ್ನು ನೀಡಿತ್ತು. ಈ ವರದಿ ಅನುಷ್ಠಾನಕ್ಕೆ ತರಬೇಕೆಂದು ನಾಯಕ ಸಮುದಾಯದ ಪೂಜ್ಯ ಶ್ರೀಗಳು ಸುಧೀರ್ಘ ಕಾಲದಿಂದ ಧರಣಿ ಮಾಡಿದ್ದಾರೆ. ಇದರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ವ ಪಕ್ಷದ ಸಭೆ ಕರೆದಿದ್ದು, ಸರ್ವ ಪಕ್ಷಗಳೂ ಈ ಬಗ್ಗೆ ಸರಕಾರಕ್ಕೆ ಸಲಹೆ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Edited By : Nagaraj Tulugeri
PublicNext

PublicNext

08/10/2022 08:24 am

Cinque Terre

40.34 K

Cinque Terre

3

ಸಂಬಂಧಿತ ಸುದ್ದಿ