ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರ ಪೋಸ್ಟರ್‌ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆಯುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. `ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು.
ಇದರಿಂದಾಗಿಯೇ ಅವರು ಪಿಂಚಣಿ ಪಡೆದುಕೊಳ್ಳುತ್ತಿದ್ದರು’ ಎಂಬ ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಪೋಸ್ಟರ್‌ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ರಾಮ್‌ಕದಮ್ ಪಕ್ಷದ ಇತರ ಕಾರ್ಯಕರ್ತರೊಂದಿಗೆ `ಚಪ್ಪಲಿ ಎಸೆಯಿರಿ’ ಆಂದೋಲನ ನಡೆಸಿದ್ದಾರೆ.
ರಾಹುಲ್‌ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರನೊಬ್ಬನನ್ನು ಅವಮಾನಿಸಿದ್ದಾರೆ. ಪದೇ ಪದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ಸಹಿಸಲಾಗುವುದಿಲ್ಲ. ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು,`ಗಾಂಧಿ, ನೆಹರು ದೇಶಕ್ಕಾಗಿ ಹೋರಾಡಿದರು. ಆರ್‌ಎಸ್‌ಎಸ್ ಹಾಗೂ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು. ಬ್ರಿಟಿಷರಿಗೆ ಸಹಾಯ ಮಾಡಿದ್ದಕ್ಕಾಗಿಯೇ ಅವರಿಗೆ ಸ್ಟೈಫಂಡ್ ಸಿಕ್ಕಿತ್ತು ಎಂದು ಹೇಳಿದ್ದರು.
PublicNext
10/10/2022 09:46 pm