ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಇಂದು ಹಿಮಾಚಲ ಪ್ರದೇಶಕ್ಕೆ ಭೇಟಿ; ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ಹಿಮಾಚಲ ಪ್ರದೇಶ (ಉನಾ) : ಪ್ರಧಾನಿ ನರೇಂದ್ರ ಮೋದಿ ಇಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ರು, ಈ ವೇಳೆ ಅಲ್ಲಿನ ಜನತೆ ಮೋದಿಯವರಿಗೆ ಅದ್ಧೂರಿಯಾಗಿ ಸ್ವಾಗತಿಸಿದ್ರು. ಅಲ್ಲದೇ ರೈಲ್ವೆ ಸ್ಟೇಷನ್‌ನಲ್ಲಿ ಮೋದಿ.. ಮೋದಿ ಎಂಬ ಘೋಷಣೆ ಕೇಳಿಬಂತು.

ಬಳಿಕ ಉನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು.

ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ‌ಉಪಸ್ಥಿತರಿದ್ದರು. ಈ ರೈಲು ದೆಹಲಿ ಮತ್ತು ಅಂಬ್ ಅಂಡೌರಾ ನಡುವೆ ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಿಯವಾಗಿ ವಿನ್ಯಾಸಗೊಳಿಸಲಾದ ಸೆಮಿ ಹೈಸ್ಪೀಡ್ ರೈಲುಗಳನ್ನು ‌‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಯೋಜನೆಯಡಿಯಲ್ಲಿ ನವದೆಹಲಿ- ವಾರಾಣಸಿ, ನವದೆಹಲಿ-ಕತ್ರಾ ಹಾಗೂ ಗಾಂಧಿನಗರ ಮತ್ತು ಮುಂಬೈ ನಡುವೆ ಓಡಿಸಲಾಗುತ್ತಿದೆ.

Edited By : Abhishek Kamoji
PublicNext

PublicNext

13/10/2022 02:45 pm

Cinque Terre

270.91 K

Cinque Terre

10

ಸಂಬಂಧಿತ ಸುದ್ದಿ