ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಮೈಸೂರು: ದಸರಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಸ್ಥಳೀಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಐಸಿಯುನಲ್ಲಿರುವ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ 19 ಟೆಸ್ಟ್ ಗೂ ಒಳಪಡಿಸಲಾಗಿದೆ.

Edited By : Nirmala Aralikatti
PublicNext

PublicNext

19/10/2020 10:18 am

Cinque Terre

87.19 K

Cinque Terre

6

ಸಂಬಂಧಿತ ಸುದ್ದಿ