ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ನಿರ್ಲಕ್ಷ್ಯಕ್ಕೆ ಪ್ರಧಾನಿಗಳ ಮೂಢತನದ ಭಾಷಣಗಳೇ ಕಾರಣ : ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ. ಹಬ್ಬಗಳ ಸಮಯ ಇದಾಗಿದ್ದರಿಂದ ಜನರು ಅತ್ಯಂತ ಎಚ್ಚರಿಕೆಯಿಂದಿರಬೇಕೆಂದು ಪ್ರಧಾನಿಗಳು ದೇಶದ ಜನತೆಗೆ ಸಲಹೆ ನೀಡಿದ್ದರು.

ಸಾಲು ಸಾಲು ಟ್ವೀಟ್ ಗಳ ಮೂಲಕ ಸಿದ್ದರಾಮಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳವಾರ (ನಿನ್ನೆ) ಸಂಜೆ ಆರು ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವಾಸಿಗಳನ್ನು ಉದ್ದೇಶಿಸಿ ಮಾಡಿರುವ ಭಾಷಣಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿಗಳು ಕೊರೊನಾ ವೈಫಲ್ಯ ಮುಚ್ಚಿಕೊಳ್ಳುವ ಹತಾಶ ಪ್ರಯತ್ನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು.

ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ನರೇಂದ್ರ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ.

ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ.

ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ? ಎಂದು ಗುಡುಗಿದ್ದಾರೆ.

Edited By : Nirmala Aralikatti
PublicNext

PublicNext

21/10/2020 07:38 am

Cinque Terre

78.94 K

Cinque Terre

14

ಸಂಬಂಧಿತ ಸುದ್ದಿ