ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2021ರ ಆರಂಭದಲ್ಲೇ ರಾಜ್ಯಕ್ಕೆ ಕೋವಿಡ್ ಲಸಿಕೆ ಲಭ್ಯ: ಸಚಿವ ಸುಧಾಕರ್

ಬೆಂಗಳೂರು: 2021ರ ಆರಂಭದಲ್ಲೇ ರಾಜ್ಯಕ್ಕೆ ಕೋವಿಡ್-19 ಲಸಿಕೆ ದೊರೆಯುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಸಚಿವರು, 'ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಇಂದು ಲಸಿಕೆ ಅಭಿವೃದ್ಧಿಯ ಪ್ರಗತಿ, ಅದರ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಿದರು. 2021ರ ಆರಂಭದ ವೇಳೆಗೆ ಲಸಿಕೆ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ' ಎಂದು ತಿಳಿಸಿದರು.

ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಇತರೆ ಸಂಸ್ಥೆಗಳಾದ ಸೀರಮ್ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಸಂಸ್ಥೆಗಳ ಜೊತೆಗೂ

ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು. ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಲಸಿಕೆ ಎಂದು ಲಭ್ಯವಾಗುತ್ತದೆ ಎಂಬ ಪ್ರಶ್ನೆಗೆ ನಿಖರ ಉತ್ತರ ಯಾರ ಬಳಿಯೂ ಸದ್ಯಕ್ಕಿಲ್ಲ ಎಂದು ಮಾಹಿತಿ ನೀಡಿದರು.

ರೋಟಾ ವೈರಸ್‌ಗೆ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯ್ತು. ಮಂಪ್ಸ್ ವೈರಸ್‌ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆ. ಈಗ ಕೊರೊನಾ ವೈರಸ್‌ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದೇವೆ ಎಂದರು.

Edited By : Vijay Kumar
PublicNext

PublicNext

27/10/2020 06:43 pm

Cinque Terre

53.36 K

Cinque Terre

2

ಸಂಬಂಧಿತ ಸುದ್ದಿ