ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಸೋಂಕು: ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್​ ಐಸಿಯುಗೆ ಶಿಫ್ಟ್‌

ನವದೆಹಲಿ: ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆ ಅಕ್ಟೋಬರ್ 1ರಂದು ಗುರಗಾಂವ್‌ನ ಮೆಡಂತಾ ಆಸ್ಪತ್ರೆಗೆ ದಾಖಲಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಅಹ್ಮದ್ ಪಟೇಲ್ ಅವರ ಆರೋಗ್ಯದಲ್ಲಿ ಇಂದು ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್‌ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಅಹ್ಮದ್ ಪಟೇಲ್ ಅವರ ಮಗ ಫೈಸಲ್ ಪಟೇಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಟ್ವೀಟ್ ಮಾಡಿರುವ ಫೈಸಲ್ ಪಟೇಲ್, ''ಕೆಲವು ವಾರಗಳ ಹಿಂದೆ ಅಹ್ಮದ್ ಪಟೇಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು. ಹೀಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರಗಾಂವ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಅಲ್ಲದೆ ಅವರ ಶೀಘ್ರ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಥಿಸಬೇಕೆಂದು ನಾವು ವಿನಂತಿಸುತ್ತೇವೆ'' ಎಂದು ಕೇಳಿಕೊಂಡಿದ್ದಾರೆ.

Edited By : Vijay Kumar
PublicNext

PublicNext

15/11/2020 06:20 pm

Cinque Terre

74.88 K

Cinque Terre

8