ನವದೆಹಲಿ: ದೆಹಲಿಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ಮತ್ತೆ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಜಾರಿಗೆ ತರಲು ಮುಂದಾಗಿದೆ.
ಕೇಂದ್ರದ ಮಾರ್ಗಸೂಚಿಯಂತೆ ಸದ್ಯ ಮದುವೆ ಸೇರಿದಂತೆ ಇತರ ಸಾರ್ವಜನಿಕ ಸಮಾರಂಭಗಳಲ್ಲಿ 200 ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ. ಆದರೆ ಇದೀಗ ಈ ಸಂಖ್ಯೆಯನ್ನು ಕೇಜ್ರಿವಾಲ್ ಸರ್ಕಾರವು 50ಕ್ಕೆ ಇಳಿಸಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸದ ಮಾರುಕಟ್ಟೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ತಮಗೆ ಅಧಿಕಾರ ನೀಡುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಸರ್ಕಾರ ಮನವಿ ಸಲ್ಲಿಸಿದ್ದಾರೆ.
ದೆಹಲಿಗೆ 750 ಹೆಚ್ಚುವರಿ ಐಸಿಯು ಹಾಸಿಗೆಗಳನ್ನು ಪೂರೈಸಿರುವ ಕೇಂದ್ರ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ದೆಹಲಿ ಸರ್ಕಾರಕ್ಕೆ ಸಕಲ ನೆರವು ನೀಡುತ್ತಿದೆ. ಆದರೆ ಜನರ ಸಹಕಾರ ದೊರೆಯದೇ ಇದ್ದರೆ ಕೋವಿಡ್ ಮೇಲೆ ನಿಯಂತ್ರಣ ಸಾಧಿಸುವುದು ಕಷ್ಟದ ಕೆಲಸವಾಗಲಿದೆ ಎಂದು ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.
PublicNext
17/11/2020 03:25 pm