ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಲಿದ್ದಾರೆ.

ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆ ರಾಜ್ಯಾದ್ಯಂತ ಚರ್ಚೆಯಾಗಿತ್ತು.

ಸದ್ಯ 37 ವರ್ಷದ ಎನ್.ಆರ್. ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಎನ್.ಆರ್ ಸಂತೋಷ್ ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಇಂದು ಬೆಳಗ್ಗೆ 10 ಘಂಟೆಗೆ ಸಂತೋಷ್ ಗೆ ರೋಟಿನ್ ಹೆಲ್ತ್ ಚೆಕಪ್ ನಡೆಸಲಿರುವ ವೈದ್ಯರು ಬಳಿಕ ಡಿಸ್ಚಾರ್ಜ್ ಮಾಡಲಿದ್ದಾರೆ.

Edited By : Nirmala Aralikatti
PublicNext

PublicNext

30/11/2020 10:01 am

Cinque Terre

79.15 K

Cinque Terre

2

ಸಂಬಂಧಿತ ಸುದ್ದಿ