ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಆರಂಭಿಕ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದೆ. ಸದ್ಯ ವರದಿ ಕೈಸೇರಿದ್ದು, ಕೊರೊನಾ ತಗುಲಿರುವುದು ದೃಢಪಟ್ಟಿದೆ. ವೈದ್ಯರ ಸಲಹೆಯ ಮೇರೆಗೆ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಿ ಮನೆಯಲ್ಲೇ ಪ್ರತ್ಯೇಕವಾಗಿದ್ದೇನೆ. ನನ್ನ ಆರೋಗ್ಯ ಉತ್ತಮವಾಗಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪ್ರತ್ಯೇಕವಾಗಿದ್ದು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
PublicNext
13/12/2020 06:00 pm