ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ವೈದ್ಯರಿಗೆ ಕ್ರಿಸ್ ಮಸ್ ಕೊಡುಗೆ: ಭತ್ಯೆ ಹೆಚ್ಚಳ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ನೀಡಲಾಗುತ್ತಿರುವ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವೈದ್ಯರಿಗೆ ತ್ವರಿತವಾಗಿ ಸ್ಪಂದಿಸಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1 ರಿಂದಲೇ ಪೂರ್ವಾನ್ವಯ ಆಗುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ. ಈ ಹಿಂದೆ 2015ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. 0-6

ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್/ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21,000 ರೂ.ನಿಂದ 30,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42,600 ರೂ.ನಿಂದ 55,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50,800 ರೂ.ನಿಂದ 64,500 ರೂ.ಗೆ ಹೆಚ್ಚಿಸಲಾಗಿದೆ.

Edited By : Nagaraj Tulugeri
PublicNext

PublicNext

22/12/2020 04:25 pm

Cinque Terre

83.72 K

Cinque Terre

6