ಬೆಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಆದರೆ ಈ ಬಾರಿ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷ ಆಚರಣೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ನಿವಾಸ ಕಾವೇರಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ರೂಪಾಂತರಗೊಂಡಿರುವುದು ಇಡೀ ರಾಜ್ಯ ಮತ್ತು ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಕೊರೊನಾ ಹೊಸ ವೈರಸ್ ಬ್ರಿಟನ್‌ನಿಂದ ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ. ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವೈರಸ್ ಹರಡದಂತೆ ಬೇಕಿರುವ ಎಚ್ಚರಿಕೆ ವಹಿಸುತ್ತೇವೆ. ಯಾರೇ ಹೊರಗಡೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಲಾಗುವುದು. ದೇಶಾದ್ಯಂತ ಈಗಾಗಲೇ ಎಚ್ಚರಿಕೆ ವಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
PublicNext
22/12/2020 07:00 pm