ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಅಧಿಕೃತವಾಗಿ ಆದೇಶ ಹೊರಡಿಸಿದೆ.
ನೈಟ್ ಕರ್ಫ್ಯೂ ಸಮಯದಲ್ಲಿಯೂ ಬದಲಾವಣೆಯನ್ನ ಸರ್ಕಾರ ಮಾಡಿದೆ. ನಾಳೆ ರಾತ್ರಿ 11ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಹೇಳಿದೆ.
ಈ ಕುರಿತು ಟ್ವೀಟ್ ಮೂಲಕ ಸಿಎಂ ಕಾರ್ಯಾಲಯ ಮಾಹಿತಿ ನೀಡಿದ್ದು, "ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ'' ಎಂದು ತಿಳಿಸಿದೆ.
ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಹೇಳಿದೆ.
PublicNext
23/12/2020 06:08 pm