ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇನ್ನಷ್ಟು ಸೌಲಭ್ಯ: ಬಿಎಸ್‌ವೈ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಸಿದಂತೆ ಸಭೆ ಜರುಗಿತು. ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ,‌ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಅವರು, ''ಕೋವಿಡ್‌ನಿಂದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24x7 ಸೇವೆಯನ್ನು ಒದಗಿಸಲು ಅಗತ್ಯವಾದ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವ ಜೊತೆಗೆ, ಈ ಕೇಂದ್ರಗಳಿಗೂ ಎಲ್ಲ ಸೇವೆಯನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ರಕ್ಷಣೆ ಸೇವೆಗಳನ್ನು ತಲುಪಿಸುವ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸುವ ಮೂಲಕ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಉಂಟು ಮಾಡುವುದು ಸರ್ಕಾರದ ಧ್ಯೇಯವಾಗಿದೆ' ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ 15 ಜಿಲ್ಲಾ ಆಸ್ಪತ್ರೆಗಳು, 18 ಇತರೆ ಆಸ್ಪತ್ರೆಗಳು, 207 ಸಮುದಾಯ ಆರೋಗ್ಯ ಕೇಂದ್ರಗಳು, 2,359 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 8,871 ಉಪಕೇಂದ್ರಗಳು ಮತ್ತು 146 ತಾಲ್ಲೂಕು ಆಸ್ಪತ್ರೆಗಳಿವೆ.

Edited By : Vijay Kumar
PublicNext

PublicNext

24/12/2020 03:59 pm

Cinque Terre

51.08 K

Cinque Terre

0