ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ನಿರೋಧಕ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಇದೇ ಕಾರಣಕ್ಕಾಗಿ ಅವರು ನಿನ್ನೆ ಮತ್ತು ಇಂದಿನ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡಿರಲಿಲ್ಲ ಎಂಬ ಮಾಹಿತಿ ಇದೆ.
ಜೂನ್ ತಿಂಗಳಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಎರಡು ಡೋಸ್ ಕೋವಿಡ್-19 ಲಸಿಕೆ ಪಡೆದಿದ್ದರು. ಆದರೆ, ಮೇ ತಿಂಗಳಲ್ಲಿ ರಾಹುಲ್ ಗಾಂಧಿ ಕೋವಿಡ್-19 ಸೋಂಕಿಗೆ ತುತ್ತಾಗಿದ್ದರಿಂದ ಲಸಿಕೆಯನ್ನು ಪಡೆದಿರಲಿಲ್ಲ.
ದೇಶದ ಜನತೆಗೆ ಲಸಿಕೆ ನೀಡಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಹಲವು ಸಲ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನ ಇತರ ನಾಯಕರು ಲಸಿಕೆ ಪಡೆದಿದ್ದಾರೆಯೇ ಎಂಬ ಸಂಗತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕು ಎಂದು ಬಿಜೆಪಿ ಟಾಂಗ್ ನೀಡಿತ್ತು.
PublicNext
30/07/2021 09:47 pm