ಹುಬ್ಬಳ್ಳಿ: ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಸರ್ಕಾರ ಕೂಡಲೇ ಮಂತ್ರಿಮಂಡಲದ ರಚನೆ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಈ ವೇಳೆ ನಾನು ಸಹ ಪ್ರವಾಸ ಮಾಡುತ್ತಿದ್ದೇನೆ. ಆದರೆ ಬಿಜೆಪಿಯ ಯಾವ ಎಂಎಲ್ ಎ ಸಹ ಕ್ಷೇತ್ರಕ್ಕೆ ಹೋಗುತ್ತಿಲ್ಲ. ಎಲ್ಲರೂ ಬೆಂಗಳೂರಿನಲ್ಲಿ ಕುಳಿತು ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುತ್ತಿದ್ದಾರೆಂದು ಆರೋಪಿಸಿದರು.
ಇನ್ನು, ಕೇರಳದಲ್ಲಿ ಹೆಚ್ಚು ಕೊರೋನಾ ಸೋಂಕು ಕಂಡುಬರುತ್ತಿದೆ. ಗಡಿಯಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಿ ಬರುವ ಜನರನ್ನು ತಪಾಸಣೆ ಗೈದು ಬಿಡಬೇಕು. ಈಗಾಗಲೇ ಮೊದಲ ಮತ್ತು ಎರಡನೇ ಅಲೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
PublicNext
01/08/2021 07:46 pm