ಬೆಂಗಳೂರು :ರಾಜ್ಯದಲ್ಲಿ ಕೋವಿಡ್ ಸೊಂಕಿನ ಪ್ರಮಾಣ ಕೆಲವು ದಿನಗಳಿಂದ ಏರಿಕೆಯಾಗುತ್ತಿರುವ ಕಾರಣದಿಂದ ಕೋವಿಡ್ ಸೋಂಕಿನ ಸಂಭಾವ್ಯ ಮೂರನೇ ಅಲೆಯ ಭೀತಿ ಹೆಚ್ಚಳವಾಗಿದೆ. ಈ ನಡುವೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಸರಣಿ ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು, ಕೋವಿಡ್ ಕಾರಣದಿಂದ ರಾಜ್ಯದಲ್ಲಿ ಜಾರಿಗೆ ತಂದ ಲಾಕ್ ಡೌನ್ ನ ಕಾರಣದಿಂದ ಲಕ್ಷಾಂತರ ಮಂದಿ ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ಮತ್ತೆ ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕೆಂದು ಹೇಳಿದ್ದಾರೆ. ದಿನ ನಿತ್ಯ ಹತ್ತಿರ ಹತ್ತಿರ ಸುಮಾರು 2000 ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುತ್ತಿವೆ. ಇದು ಮೂರನೇ ಅಲೆ ಆರಂಭವಾಗುವ ಮುನ್ಸೂಚನೆ. ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
PublicNext
03/08/2021 07:36 am