ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ಏರಿಕೆ ಹಾಗೂ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್ ಎಚ್ಚರಿಕೆಯನ್ನು ದೆಹಲಿ ಸರ್ಕಾರ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್, "ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ, ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ತಕ್ಷಣವೇ ಲಾಕ್‌ಡೌನ್ ಘೋಷಿಸಲಾಗುವುದು. ಸಂಭಾವ್ಯ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಸೋಂಕಿತರಿಗಾಗಿ 37,000 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
PublicNext
06/08/2021 08:27 am