ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ನಿಷೇಧಾಜ್ಞೆ ನಡುವೆಯೂ ಹೋಮ ನಡೆಸಿದ ಈಶ್ವರಪ್ಪ, ಮಾಡಾಳ್ ವಿರೂಪಾಕ್ಷಪ್ಪ...!

ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿಷೇಧಾಜ್ಞೆಯ ನಡುವೆಯೂ ಜನಪ್ರತಿನಿಧಿಗಳಿಂದ ಪೂಜೆ ಹೋಮ ನಡೆಸಲಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ನೂತನ ಸಚಿವ ಕೆ. ಎಸ್. ಈಶ್ವರಪ್ಪ ಹಾಗೂ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರಗೆರೆ ಮಠದಲ್ಲಿ ಹೋಮ ನಡೆಸಿದ್ದು, ವಿಶೇಷ ಪೂಜೆಯನ್ನ ಸಲ್ಲಿಸಿದ್ದಾರೆ.

ಇಂದು ನಾಗರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹಾಗೂ ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾದ ಬಳಿಕ ಚನ್ನಗಿರಿ ತಾಲೂಕಿನ ತಾವರಗೆರೆ ಮಠಕ್ಕೆ ಭೇಟಿ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಮಠದಲ್ಲಿ ಹೋಮ ನಡೆಸಿದ್ದಾರೆ.

ಆದರೆ, ಕೊರೊನಾ ಮೂರನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಮಠ ಮಾನ್ಯಗಳು ಹಾಗೂ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶ ಹಾಗೂ ಪೂಜೆ, ಹೋಮಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಆದರೆ, ಸಚಿವರು ಜಿಲ್ಲಾಡಳಿತದ ನಿಷೇಧಾಜ್ಞೆಯ ನಡುವೆ ತಾವರಗೆರೆ ಮಠದಲ್ಲಿ ಹೋಮ ಹಾಗೂ ಪೂಜೆಯನ್ನ ಮಾಡಿದ್ದಾರೆ.

Edited By : Manjunath H D
PublicNext

PublicNext

08/08/2021 02:53 pm

Cinque Terre

98.63 K

Cinque Terre

18

ಸಂಬಂಧಿತ ಸುದ್ದಿ