ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲಾ ಕಾಲೇಜು ಆರಂಭ ಹಿನ್ನೆಲೆ ಆಗಸ್ಟ್ 23ರ ಒಳಗೆ ರಾಜ್ಯದ ಎಲ್ಲಾ ಶಿಕ್ಷಕರಿಗೆ ಬಿಇಓ ಕಚೇರಿಗಳಲ್ಲಿ ವ್ಯಾಕ್ಸಿನ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರು ಹೊರವಲಯದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯ ಪಡೆದುಕೊಂಡು ಶಾಲಾ ಆರಂಭ ಮಾಡಲಾಗುತ್ತಿದೆ.
ಕೊರೊನಾ ಮುಂದಿನ ದಿನಗಳಲ್ಲಿ ಜೀವನದ ಒಂದು ಭಾಗ ಆಗುತ್ತದೆ ಮತ್ತು ಅದರ ಜೊತೆಗೆ ಬದುಕು ಕಲಿಯಬೇಕು. ಕಳೆದ ಒಂದೂವರೆ ವರ್ಷದಿಂದ ಮಕ್ಕಳ ಶಿಕ್ಷಣ ಹೋಗಿರುವುದು ಎಲ್ಲರಿಗೂ ಗೊತ್ತಿದೆ. ಅಲ್ಲದೇ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿತ್ತು. ಹಾಗಾಗಿ ತಜ್ಞರ ಅಭಿಪ್ರಾಯ ಪಡೆದು 9,10,11,12 ನೇ ತರಗತಿಗಳು ಪ್ರಾರಂಭ ಮಾಡುತ್ತಿದ್ದೇವೆ. ಹಾಗಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.
PublicNext
18/08/2021 07:48 am