ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯಿಂದ ಕೊರೊನಾ 3ನೇ ಅಲೆಗೆ ಆಹ್ವಾನ: ಸಂಜಯ್ ರಾವತ್ ಕಿಡಿ

ಮುಂಬೈ: ಬಿಜೆಪಿಯ 'ಜನ ಆಶೀರ್ವಾದ ಯಾತ್ರೆ' ಕೊರೊನಾ ಮೂರನೇ ಅಲೆಗೆ ಆಹ್ವಾನ ನೀಡಲಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟೀಕಿಸಿದ್ದಾರೆ.

ಮುಂಬೈಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಸಚಿವರು ವಿವಿಧ ರಾಜ್ಯಗಳಲ್ಲಿ ಆರಂಭಿಸಿರುವ ಜನ ಆಶೀರ್ವಾದ ಯಾತ್ರೆ ಸಂದರ್ಭದಲ್ಲಿ ನೂರಾರು, ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿಯಮಗಳನ್ನು ಪಾಲಿಸುತ್ತಿಲ್ಲ. ಇದರಿಂದ ಕೊರೊನಾ ವ್ಯಾಪಕವಾಗಿ ಮುಂದಿನ ದಿನಗಳಲ್ಲಿ ಹರಡುವ ಸಾಧ್ಯತೆ ಹೆಚ್ಚಾಗಿದೆ. ಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದೆ. ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಮಹಾರಾಷ್ಟ್ರದ ಭಾರ್ತಿ ಪವಾರ್, ಕಪಿಲ್ ಪಾಟೀಲ್ ಮತ್ತು ಭಾಗವತ್ ಕರಡ್ ಜನ ಆಶೀರ್ವಾದ ಯಾತ್ರೆಯನ್ನು ಆರಂಭಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿ ಹರಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

18/08/2021 03:47 pm

Cinque Terre

82.98 K

Cinque Terre

11

ಸಂಬಂಧಿತ ಸುದ್ದಿ