ಬೆಂಗಳೂರು: ಕೋವಿಡ್ ಹರಡುವಿಕೆ ತಡೆಯುವ ಉದ್ದೇಶದಿಂದ ಗಡಿ ಭಾಗಗಳಲ್ಲಿ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಗಡಿ ಭಾಗಗಳಲ್ಲಿ ರಾಜ್ಯಕ್ಕೆ ವಿಮಾನ ನಿಲ್ದಾಣದ ಮೂಲಕ ಆಗಮಿಸುವವರಿಗೆ ಒಂದು ವಾರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು ಎಂದು ಹೇಳಿದರು.
ಜನಜಂಗುಳಿ ಹೆಚ್ಚಾದರೆ ಕೋವಿಡ್ ಹರಡಲಿದೆ ಎಂಬ ಉದ್ದೇಶದಿಂದ ಆರೋಗ್ಯ ಇಲಾಖೆ ಯಾವುದೇ ಸಭೆ-ಸಮಾರಂಭಗಳನ್ನು ಮಾಡಬಾರದು ಎಂದು ಹೇಳುತ್ತದೆ ಎಂದ ಅವರು,ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು. ಕೇರಳದಿಂದ ಬರುವವರು ಕೋವಿಡ್ ಲಸಿಕೆ ಪಡೆದಿದ್ದು, ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೂ ಕೂಡ ಒಂದು ವಾರ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಆನಂತರ ನೆಗೆಟಿವ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.
PublicNext
31/08/2021 04:19 pm