ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

32 ವಿದ್ಯಾರ್ಥಿಗಳಿಗೆ ಕೊರೊನಾ: ಕೋಲಾರ ನರ್ಸಿಂಗ್ ಕಾಲೇಜಿನ ಮೇಲೆ ಕ್ರಮ: ಸುಧಾಕರ್

ಚಿಕ್ಕಬಳ್ಳಾಪುರ: ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆಯನ್ನು ನೀಡಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‍ನ ನರ್ಸಿಂಗ್ ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿರೋದಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಗರಂ ಆಗಿದ್ದಾರೆ.

ಈ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಜಿಎಫ್‍ನ ನರ್ಸಿಂಗ್ ಕಾಲೇಜಿನಲ್ಲಿ ಒಂದೇ ದಿನ ಕೇರಳ ಮೂಲದ 32 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ನಾಳೆ ಆ ಕಾಲೇಜಿಗೆ ಭೇಟಿ ಮಾಡುತ್ತಿದ್ದೇನೆ. ಆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

Edited By : Nagaraj Tulugeri
PublicNext

PublicNext

01/09/2021 01:26 pm

Cinque Terre

33.88 K

Cinque Terre

0

ಸಂಬಂಧಿತ ಸುದ್ದಿ