ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದಲ್ಲಿ ಲಾಕ್ ಡೌನ್, ನೈಟ್ ಕರ್ಫ್ಯೂ ರದ್ದು

ತಿರುವನಂತಪುರಂ: ಕೇರಳದಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಇಂದಿನಿಂದಲೇ ರದ್ದಾಗಲಿದೆ. ಎಂದು ಸಿಎಂ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ಕೋವಿಡ್ ಪರಿಶೀಲನಾ ಸಮಿತಿ ಸಭೆ ನಂತರ ಅವರು ಈ ಮಾಹಿತಿ ನೀಡಿದ್ದಾರೆ‌.

ಅಕ್ಟೋಬರ್ ತಿಂಗಳಿನಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಲಿವೆ. ಅದಕ್ಕೂ ಮುನ್ನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮೊದಲ ಡೋಸ್ ಪಡೆಯಬೇಕಾದ್ದು ಕಡ್ಡಾಯ. ರಾಜ್ಯದ ಜನ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಿಎಂ ಪಿಣರಾಯಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

07/09/2021 09:12 pm

Cinque Terre

95.52 K

Cinque Terre

4