ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬರುವ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿಯೂ ಶೇ.90 ರಷ್ಟು ಲಸಿಕಾಕರಣ ಗುರಿ! ಕಿಮ್ಸ್ ಕಾರ್ಯಕ್ಕೆ ಮೆಚ್ಚುಗೆ - ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೋವಿಡ್ ಅಲೆ ಎದುರಿಸುವ ಕಾರ್ಯವು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮರ್ಥ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿದೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿದೆ.ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 100 ಕೋಟಿ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ ಇದಕ್ಕಾಗಿ ಹೆಮ್ಮೆ ಪಡೋಣ ಆದರೆ ವಿಶ್ರಮಿಸುವುದು ಬೇಡ, ಬರುವ ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಅರ್ಹರೆಲ್ಲರಿಗೂ ಶೇ.90 ರಷ್ಟು ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ಕಿಮ್ಸ್ ಆವರಣದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ 100 ಕೋಟಿ ಲಸಿಕಾಕರಣ ಭಾರತ ದೇಶದ ಪಯಣ ಕಾರ್ಯಕ್ರಮ ಹಾಗೂ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಸಮರ್ಪಣೆ ಮಾಡಿ ಅವರು ಮಾತನಾಡಿದ ಅವರು,

ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು (Convert calamity into opportunity) ಎಂಬ ಮಾತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ನಿಜ ಮಾಡಿ ತೋರಿಸಿದೆ. ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್,ಮಾಸ್ಕ್,ಕೈಗವಸುಗಳಿರಲಿಲ್ಲ ಇಂದು ಈ ಉತ್ಪನ್ನಗಳನ್ನಷ್ಟೇ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ.ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ.ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ 100 ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ ಇದರ ಹಿಂದೆ ವೈದ್ಯರು,ಅರೆವೈದ್ಯಕೀಯ,ಆರೋಗ್ಯ ಕಾರ್ಯಕರ್ತರ ,ವಿವಿಧ ಇಲಾಖೆಗಳ ಅಧಿಕಾರಿ,ಸಿಬ್ಬಂದಿಯ ಶ್ರಮವಿದೆ. ಎಂದರು.

ಕಿಮ್ಸ್ ಸೇವೆ ಶ್ಲಾಘನೆ:-

ಉತ್ತರ ಕರ್ನಾಟಕದ ಹೆಮ್ಮೆಯ ಹಾಗೂ ಬಡವರ ಪಾಲಿನ ಸಂಜೀವಿನಿ ಎಂದೇ ಹೆಸರಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಈ ಪ್ರದೇಶದ 6 ರಿಂದ 7 ಜಿಲ್ಲೆಗಳು ಅವಲಂಬಿಸಿವೆ. ಕೋವಿಡ್ ಮೊದಲ ಮತ್ತು ಎರಡನೇ ಅವಧಿಯಲ್ಲಿ ಕಿಮ್ಸ್ ನೀಡಿದ ಸೇವೆ ಶ್ಲಾಘನೀಯವಾಗಿದೆ. ಈ ಸಂಸ್ಥೆ ತನ್ನ ಒಟ್ಟು ಸಾಮರ್ಥ್ಯವನ್ನು ಕ್ರೋಢೀಕರಿಸಿ ಸೇವೆ ನೀಡಿದ ಪರಿಣಾಮ ಸಾವಿರಾರು ಜನರ ಪ್ರಾಣ ಉಳಿದಿದೆ. ಬ್ಲ್ಯಾಕ್ ಫಂಗಸ್ ಖಾಯಿಲೆಗೂ ಕೂಡ ಕಿಮ್ಸ್‌ನಲ್ಲಿ ಪರಿಣಾಮಕಾರಿ ಚಿಕಿತ್ಸೆ ದೊರೆತಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತಕಂಠದಿಂದ ಶ್ಲಾಘನೆ ಮಾಡಿದರು.

Edited By : Manjunath H D
PublicNext

PublicNext

22/10/2021 12:51 pm

Cinque Terre

63.35 K

Cinque Terre

4

ಸಂಬಂಧಿತ ಸುದ್ದಿ