ಮೈಸೂರು: ಕೊರೋನಾ ಮೂರನೇ ಅಲೆಯನ್ನು ಸರ್ಕಾರ ನಿರ್ಲಕ್ಷಿಸಬಾರದು. 2ನೇ ಅಲೆಯನ್ನು ನಿರ್ಲಕ್ಷಿಸಿದ ಪರಿಣಾಮ ಹಲವಾರು ಮಂದಿ ಸಾವನ್ನಪ್ಪಿದ್ದಾರೆ. 3ನೇ ಅಲೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಅಗತ್ಯವಾಗಿದ್ದು.ರಾಜ್ಯಕ್ಕೂ ಮೂರನೇ ಅಲೆ ಬಾರದಂತೆ ಎಚ್ಚರ ವಹಿಸಬೇಕಾದುದು ಸರ್ಕಾರದ ಕರ್ತವ್ಯ ಎಂದು ನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುತ್ತದೆ.ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಟ್ಟರೂ ನಮಗೆ ಏನು ತೊಂದರೆ ಆಗುವುದಿಲ್ಲ. ಮೊದಲಿನಿಂದಲೂ ಅವರದ್ದು ಒಳ ಒಪ್ಪಂದ ನಡೆಯುತ್ತಲೇ ಇದೆ. ಅದರಲ್ಲಿ ಹೊಸತೇನು ಇಲ್ಲ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.
PublicNext
29/11/2021 01:52 pm