ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ: ಸಾಮೂಹಿಕವಾಗಿ ಸೇರುವಂತಿಲ್ಲ

ಬೆಳಗಾವಿ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ‌. ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಸಾಮೂಹಿಕವಾಗಿ ಆಚರಿಸುವಂತಿಲ್ಲ. ಡಿಸೆಂಬರ್ 30ರಿಂದ ಜನವರಿ 2ರ ವರೆಗೆ ಇ ನಿಯಮ ಜಾರಿಯಲ್ಲಿರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುವರ್ಣ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ರೆಸ್ಟೋರೆಂಟ್ ಹಾಗೂ ಕ್ಲಬ್‌ಗಳಲ್ಲಿ ಡಿಜೆ ಪಾರ್ಟಿ ಮಾಡಲು ಅವಕಾಶ ಇಲ್ಲ. ಕೋವಿಡ್ ನಿಯಮ ಪಾಲನೆಯೊಂದಿಗೆ ಕ್ಲಬ್‌ಗಳಲ್ಲಿ 50% ಜನರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್ ನಿಯಮ ಪಾಲನೆಯೊಂದಿಗೆ ಹೊಸ ವರ್ಷದ ಸಂಭ್ರಮ ಆಚರಿಸಬಹುದು‌. ಇದಕ್ಕೆ ಅಪಾರ್ಟ್‌ಮೆಂಟ್‌ಗಳ ಮಂಡಳಿಗಳೇ ಜವಾಬ್ದಾರಿಯಾಗಿರುತ್ತವೆ. ಕ್ಲಬ್ ಪಾರ್ಟಿಗಳಲ್ಲಿ ಪಾಲ್ಗೊಳ್ಳುವವರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ. ಡಿಸೆಂಬರ್ 25ರಂದು ಚರ್ಚ್‌ಗಳಲ್ಲಿ ಸಾಮಾಜಿಕ ಅಂತರಗದೊಂದಿಗೆ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

21/12/2021 03:31 pm

Cinque Terre

44.77 K

Cinque Terre

5

ಸಂಬಂಧಿತ ಸುದ್ದಿ