ನವದೆಹಲಿ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಸುರ್ಜೆವಾಲಾ, 'ಕಳೆದ ರಾತ್ರಿ ಸಾಧಾರಣ ಜ್ವರ ಮತ್ತು ಶೀತದಂತಹ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ನಾನಾಗಿಯೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ತಾವಾಗಿಯೇ ಪರೀಕ್ಷೆಗೆ ಒಳಪಡಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಒಂದು ದಿನದ ಹಿಂದಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಬಿಜೆಪಿ ನಾಯಕ ಮನೋಜ್ ತಿವಾರಿ ಅವರಿಗೆ ಕೋವಿಡ್ ದೃಢಪಟ್ಟಿತ್ತು.
PublicNext
04/01/2022 07:58 pm